(ನ್ಯೂಸ್ ಕಡಬ) newskadaba.com ಬಂಟ್ವಾಳ, ಮಾ. 14. ತಾಲೂಕಿನ ಕಾರಿಂಜೇಶ್ವರ ಸನ್ನಿಧಿಯ ಸುತ್ತಮುತ್ತಲಿನ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆಗೆ ನಿಷೇಧ ಮಾಡಿ ಸರಕಾರ ಅದೇಶ ಹೊರಡಿಸಿದೆ. ಈ ಮೂಲಕ ಹಿಂದೂ ಜಾಗರಣಾ ವೇದಿಕೆಯ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದಂತಾಗಿದೆ.
ಕಾರಿಂಜ ದೇವಾಲಯದ ಸುತ್ತಮುತ್ತ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿರುವುದರಿಂದ ದೇವಸ್ಥಾನಕ್ಕೆ ಹಾನಿಯಾಗುತ್ತಿದೆ ಎಂಬುದು ಅರೋಪ ಕೇಳಿಬರುತ್ತಿರುವ ಹಿನ್ನೆಲೆ, ಇದರ ವಿರುದ್ಧ ಪ್ರತಿಭಟನೆಗಳು ಹೋರಾಟಗಳು ನಿರಂತರವಾಗಿ ನಡೆಯುತ್ತಿತ್ತು. ಅದರೆ ಇದೀಗ ಸರಕಾರ ಗಣಿಗಾರಿಕೆಗೆ ನಿಷೇಧ ಮಾಡಿ ಅದೇಶ ಹೊರಡಿಸಿದೆ. ಕರ್ನಾಟಕ ಉಪ ಖನಿಜ ರಿಯಾಯಿತಿ ನಿಯಮಗಳು, 1994ರ ನಿಯಮ 8(3) ರಲ್ಲಿ ಪ್ರದವಾಗಿರುವ ಅಧಿಕಾರವನ್ನು ಚಲಾಯಿಸಿ ಸರ್ಕಾರವು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಾವಳಮುರು ಗ್ರಾಮದ ವ್ಯಾಪ್ತಿಯ ಶ್ರೀ ಕಾರಿಂಜೇಶ್ವರ ದೇವಸ್ಥಾನದ 02 ಕಿಲೋ ಮೀಟರ್ ಸುತ್ತಳತೆಯ ಪ್ರದೇಶವನ್ನು ಧಾರ್ಮಿಕ ಚಟುವಟಿಕೆಗಳ ಉದ್ದೇಶಕ್ಕಾಗಿ ಕಾಯ್ದಿರಿಸಿ, ಸದರಿ ಸ್ಥಳದ 02 ಕಿಲೋ ಮೀಟರ್ ಸುತ್ತಳತೆ ವ್ಯಾಪ್ತಿಯಲ್ಲಿ, ಎಲ್ಲಾ ರೀತಿಯ ಗಣಿಗಾರಿಕೆ ಮತ್ತು ಕಲ್ಲುಪುಡಿ ಚಟುವಟಿಕೆಯನ್ನು ತಕ್ಷಣದಿಂದ ಜಾರಿಗೆ ಬರುವಂತ ಹಾಗೂ ಮುಂದಿನ ಆದೇಶದವರೆಗೆ ನಿಷೇಧಿಸಿರುವುದಾಗಿ ಆದೇಶ ಹೊರಡಿಸಿದೆ.