ಕಾಣೆಯಾಗಿದ್ದ ವ್ಯಕ್ತಿ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆ.!

(ನ್ಯೂಸ್ ಕಡಬ) newskadaba.com ಉಡುಪಿ, ಮಾ. 15. ನಾಪತ್ತೆಯಾಗಿದ್ದ ಹುಬ್ಬಳ್ಳಿ ಮೂಲದ ರವಿ ಎಂಬವರು ಕಟಪಾಡಿ ರಾಷ್ಟ್ರೀಯ ಹೆದ್ದಾರಿಯ ಪಕ್ಕದ ಗಿಡಗಂಟಿಗಳ ನಡುವೆ ತೀವ್ರ ಅಸ್ವಸ್ಥಗೊಂಡ ಸ್ಥಿತಿಯಲ್ಲಿ ಪತ್ತೆಯಾದ ಕುರಿತು ಉಡುಪಿಯಲ್ಲಿ ವರದಿಯಾಗಿದೆ.

ಮಾಹಿತಿ ಪಡೆದ ಸಮಾಜ ಸೇವಕ ವಿಶು ಶೆಟ್ಟಿ ಅವರು ತಕ್ಷಣ ಸ್ಥಳಕ್ಕೆ ಧಾವಿಸಿ ಸಾಮಾಜಿಕ ಕಾರ್ಯಕರ್ತರ ನೆರವಿನಿಂದ ವ್ಯಕ್ತಿಯನ್ನು ರಕ್ಷಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.

error: Content is protected !!
Scroll to Top