(ನ್ಯೂಸ್ ಕಡಬ) newskadaba.com ಮಂಗಳೂರು,ಮಾ. 15. ಮಂಗಳೂರು ವಿಶ್ವವಿದ್ಯಾನಿಲಯದ 41ನೇ ವಾರ್ಷಿಕ ಘಟಿಕೋತ್ಸವವು ಮಾ.15ರ ಬುಧವಾರದಂದು ಮಂಗಳೂರು ವಿಶ್ವ ವಿದ್ಯಾನಿಲಯದ ಮಂಗಳ ಸಭಾಂಗಣದಲ್ಲಿ ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ರಾಷ್ಟ್ರೀಯ ಮೌಲ್ಯೀಕರಣ ಮತ್ತು ಮಾನ್ಯತಾ ಪರಿಷತ್‍ನ ನಿರ್ದೇಶಕ ಎಸ್.ಸಿ.ಶರ್ಮಾ ಮುಖ್ಯ ಅತಿಥಿಯಾಗಿ ಘಟಿಕೋತ್ಸವ ಭಾಷಣವನ್ನು ಮಾಡುವರು. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮಂಗಳೂರು ವಿಶ್ವ ವಿದ್ಯಾನಿಲಯದ ಕುಲಪತಿಗಳಾದ ಡಾ.ಅಶ್ವಥ್ಥ್ ನಾರಾಯಣ್.ಸಿ.ಎನ್ ಅಧ್ಯಕ್ಷತೆ ವಹಿಸುವರು.
ಇಂದು ಮಂಗಳೂರು ವಿವಿ ಘಟಿಕೋತ್ಸವ
