ಮಂಗಳೂರು: ಇಂದು ಆದಿವಾಸಿ ಸಮುದಾಯ ಭವನ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಮಂಗಳೂರು,ಮಾ. 15. ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಪೆರ್ಮುದೆ ಗ್ರಾಮ ಪಂಚಾಯತ್ ಸಹಕಾರದೊಂದಿಗೆ ಕುತ್ತೆತೂರಿನಲ್ಲಿ ಆದಿವಾಸಿ ಸಮುದಾಯ ಭವನದ ನೂತನ ಕಟ್ಟಡದ ಮಾ.15ರ ಬುಧವಾರ ಬೆಳಗ್ಗೆ 10 ಗಂಟೆಗೆ ಲೋಕಾರ್ಪಣೆಯಾಗಲಿದೆ.

ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವರಾದ ಬಿ.ಶ್ರೀರಾಮುಲು ಭವನವನ್ನು ಲೋಕಾರ್ಪಣೆ ಮಾಡುವರು.
ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ಹಾಗೂ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಗೌರವ ಉಪಸ್ಥಿತಿ ವಹಿಸುವರು. ಶಾಸಕರಾದ ಉಮಾನಾಥ ಎ ಕೋಟ್ಯಾನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದರಾದ ನಳಿನ್ ಕುಮಾರ್ ಕಟೀಲ್, ರಾಜ್ಯಸಭಾ ಸಂಸದರಾದ ವೀರೇಂದ್ರ ಹೆಗ್ಗಡೆ, ಶಾಸಕರಾದ ಯು.ಟಿ. ಖಾದರ್, ಡಿ.ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ ವೈ, ಹರೀಶ್ ಪೂಂಜ, ರಾಜೇಶ್ ನಾಯ್ಕ್ ಯು, ಸಂಜೀವ ಮಠಂದೂರು, ವಿಧಾನ ಪರಿಷತ್ ಶಾಸಕರಾದ ಬಿ.ಎಂ. ಫಾರೂಕ್, ಕೆ. ಹರೀಶ್ ಕುಮಾರ್, ಆಯನೂರು ಮಂಜುನಾಥ, ಎಸ್.ಎಲ್. ಭೋಜೇಗೌಡ, ಕೆ.ಪ್ರತಾಪ್ ಸಿಂಹ ನಾಯಕ, ಮಂಜುನಾಥ ಭಂಡಾರಿ, ಪೆರ್ಮುದೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಸಾದ್ ಎನ್ ಅಂಚನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಿಮ್ಮಪ್ಪ ಶೆಟ್ಟಿ, ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ವಿ. ತೀರ್ಥರಾಮ, ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮದ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

Also Read  ಕಾಮನ್ವೆಲ್ತ್ ಸಂಸದೀಯ ಸಭೆ- ಸ್ಪೀಕರ್ ಯು.ಟಿ. ಖಾದರ್ ಭಾಗಿ

error: Content is protected !!
Scroll to Top