ಮಾ. 18ರಿಂದ 28ರವರೆಗೆ ಜಿಲ್ಲೆಯ ವಿವಿಧೆಡೆ ಲೋಕಾಯುಕ್ತರಿಂದ ಅಹವಾಲು ಸ್ವೀಕಾರ

(ನ್ಯೂಸ್ ಕಡಬ) newskadaba.com ಮಂಗಳೂರು,ಮಾ. 15. ಸಾರ್ವಜನಿಕರ ಕುಂದು ಕೊರತೆ, ಅಹವಾಲುಗಳನ್ನು ಆಲಿಸಲು ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಇದೇ ಮಾ.18 ರಿಂದ 28ರ ವರೆಗೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಸಭೆಗಳನ್ನು ಹಮ್ಮಿಕೊಂಡಿದ್ದಾರೆ.

ವಿವರ ಇಂತಿದೆ:
ಮಾ.18ರ ಶನಿವಾರದಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1ರ ವರೆಗೆ ಮುಲ್ಕಿ ನಗರ ಪಂಚಾಯತ್ ಸಮುದಾಯ ಭವನದಲ್ಲಿ, ಮಾ. 21ರಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 1ರ ವರೆಗೆ ಬಂಟ್ವಾಳ ತಾಲೂಕು ಕಚೇರಿಯಲ್ಲಿ, ಮಾ.27ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1ರ ವರೆಗೆ ಪುತ್ತೂರು ತಾಲೂಕು ಕಚೇರಿಯಲ್ಲಿ ಹಾಗೂ ಮಾ.28ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1ರ ವರೆಗೆ ಸುಳ್ಯ ತಾಲೂಕು ಕಚೇರಿಯಲ್ಲಿ ಸಾರ್ವಜನಿಕರ ಕುಂದುಕೊರತೆ, ಅಹವಾಲುಗಳನ್ನು ಆಲಿಸುವರು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿಗಳು, ನೌಕರರ ವಿರುದ್ಧ ಸಾರ್ವಜನಿಕರು ಈ ಸಂದರ್ಭದಲ್ಲಿ ದೂರು ನೀಡಬಹುದಾಗಿದೆ. ಇದಲ್ಲದೇ ಉಳಿದ ದಿನಗಳಲ್ಲೂ ಕಚೇರಿ ವೇಳೆಯಲ್ಲಿ ಕೂಡ ಸಾರ್ವಜನಿಕರು ತಮ್ಮ ಅಹವಾಲು/ದೂರುಗಳನ್ನು ಸಲ್ಲಿಸಬಹುದಾಗಿದೆ ಅಥವಾ ದೂರವಾಣಿ ಮೂಲಕವೂ ಸಂಪರ್ಕಿಸಬಹುದಾಗಿದೆ. ಅರ್ಜಿಗಳನ್ನು ನೇರವಾಗಿ ಮಾನ್ಯ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ/ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು-560001 ರವರಿಗೆ ಸಲ್ಲಿಸಬಹುದು.

error: Content is protected !!

Join the Group

Join WhatsApp Group