PSI ಮೇಲೆ ಶಾಸಕರ ಪುತ್ರನಿಂದ ಹಲ್ಲೆ ಆರೋಪ ➤ ಕೇಸ್ ದಾಖಲು

(ನ್ಯೂಸ್ ಕಡಬ) newskadaba.com ಸಿಂಧನೂರ, ಮಾ. 15. ರಂಗಮಂದಿರದ ಎದುರು ಪುನೀತ್ ರಾಜಕುಮಾರ್ ಪುತ್ಥಳಿ ಸ್ಥಾಪನೆಗೆ ಸಂಬಂಧಿಸಿದಂತೆ ಪೊಲೀಸರು ಮತ್ತು ಪುನೀತ್‌ ರಾಜ್‌ಕುಮಾರ್ ಅಭಿಮಾನಿಗಳ ನಡುವೆ ನಡೆದ ತಳ್ಳಾಟದ ವೇಳೆ ಪಿಎಸ್ ಐ ಮೇಲೆ ಹಲ್ಲೆ ನಡೆಸಿರುವ ಕುರಿತು ವರದಿಯಾಗಿದೆ.

ಸಿಂಧನೂರು ಶಾಸಕ ವೆಂಕಟರಾವ್ ನಾಡಗೌಡ ಅವರ ಪುತ್ರ ಅಭಿಷೇಕ್ ನಾಡಗೌಡರ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರು ಸಿಂಧನೂರಿನಲ್ಲಿ ನೂತನವಾಗಿ ನಿರ್ಮಿಸಿದ ರಂಗ ಮಂದಿರದ ಮುಂದೆ ನಟ ದಿವಂಗತ ಪುನೀತ್ ರಾಜಕುಮಾರ್ ಅವರ ಪ್ರತಿಮೆ ಸ್ಥಾಪಿಸಬೇಕು ಮತ್ತು ರಂಗ ಮಂದಿರಕ್ಕೆ ಅಪ್ಪು ಹೆಸರಿಡಬೇಕು ಎಂದು ಒತ್ತಾಯಿಸಿ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದರು.  ವೇಳೆ ಮೆರವಣಿಗೆಯನ್ನು ತಹಶೀಲ್ದಾರ್ ಅರುಣ್ ಎಚ್.ದೇಸಾಯಿ ಹಾಗೂ ಇತರ ಅಧಿಕಾರಿಗಳು ಮತ್ತು ಪೊಲೀಸರು ತಡೆದಿದ್ದರು. ಈ ವೇಳೆ ವಾಗ್ವಾದ ಹಾಗೂ ತಳ್ಳಾಟ ನಡೆದಿದೆ ಎನ್ನಲಾಗಿದೆ.

Also Read  ಮೆಟಲ್ ಪ್ಲೇಟ್ ಮೈಮೇಲೆ ಬಿದ್ದು ಮಹಿಳೆ ಮೃತ್ಯು..!

error: Content is protected !!
Scroll to Top