(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮಾ. 15. ಕೂಲಿ ಕೆಲಸಕ್ಕೆಂದು ತೆರಳಿದ್ದ ಮಹಿಳೆಯೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಬೆಳ್ತಂಗಡಿಯಿಂದ ವರದಿಯಾಗಿದೆ.
ಮೃತ ಮಹಿಳೆಯನ್ನು ಮುಂಡಾಜೆ ಗ್ರಾಮದ ಸನ್ಯಾಸಿಕಟ್ಟೆ ನಿವಾಸಿ ಪಾರ್ವತಿ ಎಂದು ಗುರುತಿಸಲಾಗಿದೆ. ಇವರು ಮುಂಡಾಜೆ ಗ್ರಾಮದ ಸೋಮಂತ್ತಡ್ಕ ಗಣೇಶ್ ಎಂಬವರ ಮನೆಗೆ ಕೂಲಿ ಕೆಲಸಕ್ಕೆಂದು ಹೋಗಿದ್ದರು. ಅಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭ ಹಠಾತ್ತನೆ ಕುಸಿದು ಬಿದ್ದು ಪ್ರಜ್ಞೆ ಕಳೆದುಕೊಂಡರೆನ್ನಲಾಗಿದೆ. ಕೂಡಲೇ ಚಿಕಿತ್ಸೆಗಾಗಿ ಕಕ್ಕಿಂಜೆ ಆಸ್ಪತ್ರೆಗೆ ಕರೆದೊಯ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಮೃತರ ಪುತ್ರಿ ಪುಷ್ಪಾ ನೀಡಿರುವ ದೂರಿನಂತೆ ಪ್ರಕರಣ ದಾಖಲಾಗಿದೆ.