ರಾಜ್ಯದ 5 ಕಡೆ ವಿಮಾನ ನಿಲ್ದಾಣಗಳ ನಿರ್ಮಾಣ ➤ ಸಚಿವ ನಿರಾಣಿ

(ನ್ಯೂಸ್ ಕಡಬ) newskadaba.comಲಬುರಗಿ, ಮಾ. 15. ಕರ್ನಾಟಕದ ಸಮಗ್ರ ಅಭಿವೃದ್ಧಿ ನಿಟ್ಟಿನಲ್ಲಿ ರಾಜ್ಯದ ಐದು ಕಡೆ ವಿಮಾನ ನಿಲ್ದಾಣ ನಿರ್ಮಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಹೇಳಿದರು. ಇಲ್ಲಿನ ಗುಲ್ಬರ್ಗ ವಿವಿ ಆವರಣದಲ್ಲಿ ಬುಧವಾರದಂದು ನಡೆದ ಕೇಂದ್ರ ಸರ್ಕಾರದ ಪ್ರಾಯೋಜಿತ ಹಾಗೂ ರಾಜ್ಯ ಸರ್ಕಾರದ ಫಲಾನುಭವಿಗಳ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ಅವರು, ಇತ್ತೀಚೆಗೆ ಶಿವಮೊಗ್ಗ ವಿಮಾನ ನಿಲ್ದಾಣವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಉದ್ಘಾಟಿಸಿ ನಾಡಿಗೆ ಸಮರ್ಪಿಸಿದ್ದಾರೆ. ಹಾಸನ, ವಿಜಯಪುರ ವಿಮಾನ ನಿಲ್ದಾಣದ ಕಾರ್ಯ ಭರದಿಂದ ಸಾಗುತ್ತಿದ್ದು, ಶೀಘ್ರದಲ್ಲೇ ಉದ್ಘಾಟನೆ ಮಾಡಲಾಗುವುದು. ಪ್ರಮುಖವಾಗಿ ದಾವಣಗೆರೆ, ಬಾಗಲಕೋಟೆ ಜಿಲ್ಲೆಯ ಬಾದಾಮಿ, ಕೊಪ್ಪಳ, ರಾಯಚೂರು ಹಾಗೂ ಚಿಕ್ಕಮಗಳೂರಿನಲ್ಲಿ ವಿಮಾನ ನಿಲ್ದಾಣ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ ಎಂದು ಸಚಿವ ನಿರಾಣಿ ಹೇಳಿದರು.

Also Read  ರೈಲು ಢಿಕ್ಕಿ- ಮಹಿಳೆ ಗಂಭೀರ

error: Content is protected !!
Scroll to Top