ಕೇರಳದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ➤ ಮೂವರು ಆಸ್ಪತ್ರೆಗೆ ದಾಖಲು

Crime

(ನ್ಯೂಸ್ ಕಡಬ) newskadaba.com  ಪಾಲಕ್ಕಾಡ್, ಮಾ. 15. ಕೇರಳದ ಪಾಲಕ್ಕಾಡ್‌ನಲ್ಲಿ ಇಬ್ಬರು ಬಿಜೆಪಿ ಕಾರ್ಯಕರ್ತರು ಸೇರಿದಂತೆ ಒಟ್ಟು ಮೂವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ.

ಹಲ್ಲೆಗೊಳಗಾದವರನ್ನು ಕೇರಳದ ಪಾಲಕ್ಕಾಡ್ ಜಿಲ್ಲೆಯ ವಿಷ್ಣು ಮತ್ತು ದಿನೇಶ್ ಎಂದು ಗುರುತಿಸಲಾಗಿದೆ. ಈ ಸಂದರ್ಭ ದಾಳಿಕೋರರನ್ನು ತಡೆಯಲು ಮುಂದಾದ ವಿಷ್ಣು ಅವರ ತಾಯಿಯ ಮೇಲೂ ಹಲ್ಲೆ ನಡೆಸಲಾಗಿದೆ. ಘಟನೆಯ ಬಳಿಕ ಗಾಯಗೊಂಡ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಕುರಿತು ಆಲತ್ತೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನೆಯ ತನಿಖೆ ನಡೆಯುತ್ತಿದ್ದು, ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

Also Read  ಪತ್ನಿ ಎದುರಲ್ಲೇ ಆರೆಸ್ಸೆಸ್ ಕಾರ್ಯಕರ್ತನ ಭೀಕರ ಹತ್ಯೆ..!

error: Content is protected !!
Scroll to Top