ಅನಧಿಕೃತ ಜಾಹೀರಾತು ಫಲಕ ತೆರವು, ಸಭೆ ಸಮಾರಂಭಗಳ ಮೇಲೆ ನಿಗಾ ➤ ದ.ಕ. ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.15. ವಿಧಾನಸಭಾ ಚುನಾವಣೆ ಸದ್ಯದಲ್ಲೇ ಘೋಷಣೆಯಾಗುವ ಸಾಧ್ಯತೆಯಿದೆ. ಆದ್ದರಿಂದ ನಿಷ್ಪಕ್ಷ ಚುನಾವಣೆ ನಡೆಸುವ ಉದ್ದೇಶದಿಂದ ಜಿಲ್ಲೆಯಲ್ಲಿ ಅನಧಿಕೃತ ಜಾಹೀರಾತು ಫಲಕಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು. ಅದೇರೀತಿ ಸಾರ್ವಜನಿಕರ ಸಭೆ ಸಮಾರಂಭಗಳ ಮೇಲೆ ನಿಗಾ ಇರಿಸುವಂತೆ ಜಿಲ್ಲಾಧಿಕಾರಿ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.


ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಅನುಮತಿ ಪಡೆಯದೆ ಹಾಕಲಾಗಿರುವ ಬ್ಯಾನರ್- ಬಂಟಿಂಗ್ಸ್ ಮತ್ತು ಫ್ಲೆಕ್ಸ್, ಗೋಡೆ ಬರಹ ಮತ್ತು ಇತರ ಜಾಹೀರಾತುಗಳನ್ನು ತೆರವುಗೊಳಿಸಿ ಪ್ರತೀ ದಿನ ವರದಿ ಸಲ್ಲಿಸಬೇಕು ಎಂದು ಸೂಚಿಸಿರುವ ಜಿಲ್ಲಾಧಿಕಾರಿ, ನಗರ ಮತ್ತು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳು ಮತ್ತು ಸಂಬಂಧಪಟ್ಟ ಇಲಾಖೆಗಳ ಅನುಮತಿ ಪಡೆಯದೆ ರಾಜಕೀಯ ಪಕ್ಷ ಮತ್ತು ರಾಜಕೀಯ ವ್ಯಕ್ತಿಗಳು ಸಾರ್ವಜನಿಕ ಔತಣಕೂಟ ಏರ್ಪಡಿಸುವಂತಿಲ್ಲ. ಒಂದು ವೇಳೆ ಉಲ್ಲಂಘಿಸಿದಲ್ಲಿ ಸ್ಥಳೀಯ ಪ್ರಾಧಿಕಾರಗಳು, ಪೊಲೀಸ್ ಇಲಾಖೆ, ಅಬಕಾರಿ ಇಲಾಖೆ ಹಾಗೂ ಆರೋಗ್ಯ ಇಲಾಖೆಗಳು, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ, ಐಪಿಸಿ ಕಲಂ 171 ರಡಿಯಲ್ಲಿ ಹಾಗೂ ಸಂಬಂಧಪಟ್ಟ ಇತರ ಕಾಯ್ದೆಗಳ ಅಡಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

Also Read  ಉಪ್ಪಿನಂಗಡಿ: ರಸ್ತೆ ಅಪಘಾತ  ➤ ಪ್ರಯಾಣಿಕರಿಗೆ ಗಾಯ

error: Content is protected !!
Scroll to Top