(ನ್ಯೂಸ್ ಕಡಬ) newskadaba.com.ಕೊಡಗು.ಮಾ. 15. ಪ್ರೀತಿಸಿ ಮದುವೆಯಾಗಿದ್ದ ಯುವತಿ ಮೂರು ದಿನದಲ್ಲೇ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಕೊಡಗಿನ 6ನೇ ಹೊಸಕೋಟೆಯಲ್ಲಿ ನಡೆದಿದೆ.
ಅಕ್ಷಿತಾ (18) ಮೃತ ದುರ್ದೈವಿಯಾಗಿದ್ದು, ದಲಿತ ಯುವತಿ ಎಂದು ಹತ್ಯೆ ಮಾಡಿರುವ ಆರೋಪ ಕೇಳಿ ಬಂದಿದೆ. ಮೃತ ಅಕ್ಷಿತಾ ಹೇಮಂತ್ ಎಂಬ ಯುವಕನನ್ನು ಪ್ರೀತಿಸುತ್ತಿದ್ದು, ಕಳೆದ ಮೂರು ದಿನಗಳ ಹಿಂದೆಯಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಆದರೆ ಮದುವೆಯಾದ ಮೂರು ದಿನಗಳಲ್ಲೇ ಆಕೆ ಸಾವನ್ನಪ್ಪಿದ್ದಾಳೆ. ಘಟನೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಯುವತಿಯ ಪೋಷಕರು, ದಲಿತ ಸಮುದಾಯದ ಯುವತಿ ಎಂದು ಹೇಮಂತ್ ಪೋಷಕರು ತಮ್ಮ ಮಗಳನ್ನು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.