(ನ್ಯೂಸ್ ಕಡಬ) newskadaba.com.ಉಡುಪಿ..ಮಾ 16. ಬೇಸಿಗೆಯಲ್ಲಿ ಜಿಲ್ಲೆಯನಗರ ಹಾಗೂ ಗ್ರಾಮೀಣ ಭಾಗದ ಜನರಿಗೆಕುಡಿಯುವ ನೀರಿನ ಸಮಸ್ಯೆಗಳು ಆಗದಂತೆ ಎಲ್ಲಾ ರೀತಿಯ ಎಚ್ಚರಿಕೆ ವಹಿಸಿ ಸಮಸ್ಯೆಗಳು ಉಂಟಾಗದಂತೆ ನೋಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಇಂದು ರಜತಾದ್ರಿಯ ಜಿಲ್ಲಾಧಿಕಾರಿ ಕಛೇರಿಯ ಕೋರ್ಟ್ ಹಾಲ್ ನಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಾಮಾನ್ಯವಾಗಿ ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ನೀರಿನ ಸಮಸ್ಯೆಗಳು ಉಂಟಾಗುತ್ತವೆ. ಜಿಲ್ಲೆಯಲ್ಲಿ ಕಳೆದ ಸೆಪ್ಟಂಬರ್ ಇದುವರೆಗೆ ಹೇಳುವಂತಹ ಮಳೆ ಬೀಳದೆ ಇರುವ ಕಾರಣ, ಜಿಲ್ಲೆಯ ವಿವಿಧ ಭಾಗಗಳಲ್ಲಿ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಸಾಧ್ಯತೆಗಳಿವೆ. ಆದ್ದರಿಂದ ಎಲ್ಲಾ ಸ್ಥಳೀಯ ಸಂಸ್ಥೆಗಳು ,ಗ್ರಾಮ ಪಂಚಾಯತ್ ಗಳು ತಮ್ಮ ವ್ಯಾಪ್ತಿ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಬೇಕು, ಒಂದೊಮ್ಮೆ ನೀರಿನ ಸಮಸ್ಯೆಯಾದಲ್ಲಿ ಟ್ಯಾಂಕರ್‌ಗಳ ಮೂಲಕ ಜನ ಸಾಮಾನ್ಯರಿಗೆ ನೀರು ಸರಬರಾಜು ಮಾಡಬೇಕೆಂದು ತಿಳಿಸಿದರು.