ಲಂಚ ಪ್ರಕರಣ ➤ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಮತ್ತೊಂದು ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com. ಬೆಂಗಳೂರು. ಮಾ 16.  ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಕೆ. ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಮತ್ತೊಂದು ಪ್ರಕರಣ ದಾಖಲಿಸಲು ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ ಎಂದು ಮೂಲಗಳು ಇಂದು ತಿಳಿಸಿವೆ.

ಪ್ರಕರಣದ ಪ್ರಮುಖ ಆರೋಪಿ ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ಪಡೆದಿರುವುದಕ್ಕೆ ಲೋಕಾಯುಕ್ತ ಅಧಿಕಾರಿಗಳು ಅಸಮಾಧಾನಗೊಂಡಿದ್ದು, ಪ್ರಕರಣದ ಎರಡನೇ ಆರೋಪಿಯಾಗಿರುವ ಪುತ್ರ ಪ್ರಶಾಂತ್ ಮಾಡಾಳ್ ಜೈಲು ಪಾಲಾಗಿದ್ದಾರೆ ಎಂದು ತಿಳಿದು ಬಂದಿದೆ.

Scroll to Top