(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.16. ಇಂದು ಮಂಗಳೂರಿನಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನ ನಡೆಯಲಿದೆ. ಕರಾವಳಿ ಉತ್ಸವ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್, ಸಚಿವರಾದ ಎಸ್.ಅಂಗಾರ ಹಾಗೂ ಕೋಟ ಶ್ರೀನಿವಾಸ ಪೂಜಾರಿ ಉಪಸ್ಥಿತರಿರುವರು. ಶಾಸಕ ಡಿ. ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದ ನಳಿನ್ ಕುಮಾರ್ ಕಟೀಲು ಸಹಿತ ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸಲಿದ್ದಾರೆ.
