(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.16. ಮದುವೆ ಆಗುವುದಾಗಿ ಆಮಿಷವೊಡ್ಡಿ ಅತ್ಯಾಚಾರ ಎಸಗಿದ್ದಲ್ಲದೆ ಗರ್ಭಿಣಿಯಾದ ಬಳಿಕ ಬಲವಂತವಾಗಿ ಗರ್ಭಪಾತ ಮಾಡಿಸಿದ ದಂತ ವೈದ್ಯನ ವಿರುದ್ದ ನರ್ಸ್‌ವೊಬ್ಬರು ಮಂಗಳೂರು ಮಹಿಳಾ ಠಾಣೆಗೆ ದೂರು ನೀಡಿದ್ದಾರೆ.
ನಗರದ ಖಾಸಗಿ ಆಸ್ಪತ್ರೆಯೊಂದರ ನರ್ಸ್ ಕೇರಳ ಮೂಲದ ದಂತ ವೈದ್ಯ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಮಾಡಿದ್ದ ಎನ್ನಲಾಗಿದೆ. ಆಕೆ ಗರ್ಭಿಣಿಯಾದಾಗ ಬಲವಂತವಾಗಿ ಮಾತ್ರೆಗಳನ್ನು ಕೊಟ್ಟು ಗರ್ಭಪಾತ ಮಾಡಿಸಿದ್ದ ಎಂದು ಆರೋಪಿಸಲಾಗಿದೆ.