(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.16. ಸಾರಿಗೆ ನೌಕರರ ವೇತನ ಹೆಚ್ಚಳ, ವಿವಿಧ ಭತ್ಯೆಗಳ ಹೆಚ್ಚಳ, ಸೇವೆಯಿಂದ ವಜಾಗೊಂಡಿರುವ ನೌಕರರ ಮರುನೇಮಕ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಮಾ.21ರಿಂದ ರಾಜ್ಯಾದ್ಯಂತ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರಮಹಾಮಂಡಳಿ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಫೆಡರೇಷನ್ನನ ಜಂಟಿ ಕ್ರಿಯಾ ಸಮಿತಿ ಕರೆ ನೀಡಿದೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾಮಂಡಳಿ ಅಧ್ಯಕ್ಷ ಎಚ್.ವಿ.ಅನಂತಸುಬ್ಬರಾವ್, ‘ಮಾ.21ರಂದು ಬೆಳಗ್ಗೆ 6ರಿಂದ 4 ನಿಗಮದ 23 ಸಾವಿರ ಬಸ್ಗಳು, 1 ಲಕ್ಷದ 25 ಸಾವಿರ ನೌಕರರು ಮುಷ್ಕರದಲ್ಲಿ ಭಾಗಿಯಾಗಲಿದ್ದಾರೆ. ಹಿಂದಿನ ದಿನ ರಾತ್ರಿಯೇ 23 ಸಾವಿರ ಬಸ್ಗಳು ಡಿಪೋ ಒಳಗಡೆ ಇರಲಿದೆ. ಹೊರಗೆ ಬರಲ್ಲ’ ಎಂದು ಮಾಹಿತಿ ನೀಡಿದರು.