ಕಾರ್ಕಳ: ಯುವಕನಿಗೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ತಂಡ ► ಗಾಯಾಳು ಯುವಕ ಆಸ್ಪತ್ರೆಗೆ

(ನ್ಯೂಸ್ ಕಡಬ) newskadaba.com ಕಾರ್ಕಳ, ಜ.05. ಕರಾವಳಿಯಲ್ಲಿ ಕೋಮು ಘರ್ಷಣೆಯ ಬಿಸಿ ಆರುವುದಕ್ಕಿಂತ ಮೊದಲೇ ಯುವಕನೋರ್ವನಿಗೆ ತಂಡವೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ ಕಾರ್ಕಳದ ಬಂಗ್ಲೆಗುಡ್ಡೆ ಜಂಕ್ಷನ್‌ನಲ್ಲಿ ಗುರುವಾರ ರಾತ್ರಿ ನಡೆದಿದೆ.

ಹಲ್ಲೆಗೊಳಗಾದ ಯುವಕನನ್ನು ಫುಲ್ಕೇರಿ ನಿವಾಸಿ ಮೊಹ್ಸಿನ್ ಎಂದು ಗುರುತಿಸಲಾಗಿದೆ. ಗುರುವಾರ ರಾತ್ರಿ ಬಂಗ್ಲೆಗುಡ್ಡೆ ಜಂಕ್ಷನ್ ನಲ್ಲಿ ನಿಂತಿದ್ದಾಗ ಉಡುಪಿ ಜಿಲ್ಲಾ ಬಜರಂಗದಳದ ಮುಖಂಡ ಮಹೇಶ್ ಶೆಣೈ ನೇತೃತ್ವದಲ್ಲಿ ಬಂದ ಆರೇಳು ಮಂದಿಯ ತಂಡ ಮೊಹ್ಸಿನ್ ಮೇಲೆ ಮಾರಕಾಯುಧಗಳಿಂದ ಹಲ್ಲೆ ನಡೆಸಿದೆ ಎಂದು ಪೊಲೀಸ್ ದೂರು ನೀಡಲಾಗಿದೆ. ಈ ಬಗ್ಗೆ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ವಿವಿ ತುಳು ಎಂಎ ಅಧ್ಯಯನ ಪ್ರವೇಶ ಶುಲ್ಕ ಕಡಿತಕ್ಕೆ ಸಂಸದ ಚೌಟ ಮನವಿ - ಪ್ರವೇಶ ಶುಲ್ಕದಲ್ಲಿ ರಿಯಾಯಿತಿ ನೀಡುವಂತೆ ಶಿಕ್ಷಣ ಸಚಿವರಿಗೆ ಪತ್ರ

error: Content is protected !!
Scroll to Top