(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.16. ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ‘ಕಾಂತಾರ’ ಸಿನಿಮಾ ಸೂಪರ್ ಹಿಟ್ ಆಗಿದೆ. ಜತೆಗೆ, ಕರ್ನಾಟಕದ ಸಂಸ್ಕೃತಿ, ಆಚರಣೆಯನ್ನು ದೇಶದ ಜನರಿಗೆ ಪರಿಚಯಿಸುವ ಮೂಲಕ ಗಮನ ಸೆಳೆದಿದೆ. ಇದೀಗ ಮಾರ್ಚ್ 17ರಂದು ನಟ ದಿ. ಪುನೀತ್ ರಾಜ್‌ಕುಮಾರ್ ಜನ್ಮದಿನದಂದು ವಿಶ್ವಸಂಸ್ಥೆಯಲ್ಲಿ ‘ಕಾಂತಾರ’ ಸಿನಿಮಾ ಪ್ರದರ್ಶನಗೊಳ್ಳುತ್ತಿರುವುದು ವಿಶೇಷ.
ವಿಶ್ವಸಂಸ್ಥೆಯ ವಾರ್ಷಿಕ ಸಭೆ ನಡೆಯುತ್ತಿದ್ದು, ವಿಶ್ವದ ಹಲವು ರಾಷ್ಟ್ರಗಳ ಪ್ರತಿನಿಧಿಗಳು ವಿಶ್ವ ಇದೀಗ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸುತ್ತಿದ್ದಾರೆ. ಈ ಸಭೆಯಲ್ಲಿ ನಟ ರಿಷಬ್ ಶೆಟ್ಟಿ ಸಹ ಭಾಗವಹಿಸಲಿದ್ದು, ಪರಿಸರ ಸಂರಕ್ಷಣೆ, ಹವಾಮಾನ ಸೇರಿದಂತೆ ಹಲವು ವಿಷಯಗಳ ಬಗ್ಗೆ ಮಾತನಾಡಲಿದ್ದಾರೆ.
