ಟೋಲ್‌ ಸಂಗ್ರಹ ವಿರೋಧಿಸಿ ಪ್ರತಿಭಟನೆ ➤ನಿಖಿಲ್‌ ಕುಮಾರಸ್ವಾಮಿ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com. ರಾಮನಗರ. ಮಾ 16.  ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ಟೋಲ್‌ ಸಂಗ್ರಹ ವಿರೋಧಿಸಿ ಪ್ರತಿಭಟನೆ ಮಾಡುತ್ತಿದ್ದ ವೇಳೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರನ್ನು ರಾಮನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.

ಸತತ ಎರಡು ಗಂಟೆಗೂ ಹೆಚ್ಚು ಕಾಲ‌ ಪ್ರತಿಭಟನೆ ನಡೆಸಿದ್ದು, ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಶ್ರೀಧರ್‌ಗಾಗಿ ನಿಖಿಲ್ ಕುಮಾರಸ್ವಾಮಿ ಕಾದಿದ್ದಾರೆ. ಆಗ ಎಚ್ಚೆತ್ತ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ.

ಇನ್ನು ಬೆಂಗಳೂರು-ಮೈಸೂರು ಹೆದ್ದಾರಿಯ ಅನಧಿಕೃತ ಟೋಲ್ ಸಂಗ್ರಹ ವಿರೋಧಿಸಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರೊಂದಿಗೆ ಪ್ರತಿಭಟನೆ ನಡೆಸಲಾಯಿತು.

error: Content is protected !!
Scroll to Top