ಮಾ. 27ರಿಂದ 5 ಮತ್ತು 8ನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ➤ ವೇಳಾಪಟ್ಟಿ ಪ್ರಕಟ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 16. 5 ಮತ್ತು 8ನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸುವುದಕ್ಕೆ ಕರ್ನಾಟಕ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ್ದು, ಇದೀಗ ಶಿಕ್ಷಣ ಇಲಾಖೆಯು ಮೌಲ್ಯಾಂಕನ ಪರೀಕ್ಷೆಗೆ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ಕುರಿತು ಕರ್ನಾಟಕ ಶಾಲಾ ಗುಣಮಟ್ಟ, ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್ತಿನ ಕಾರ್ಯನಿರ್ವಾಹಕ ನಿರ್ದೇಶಕರು ಮಾಹಿತಿ ನೀಡಿದ್ದಾರೆ.

 

2022-23ನೇ ಸಾಲಿನ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಮಾರ್ಚ್ 13 ರಿಂದ ಮೌಲ್ಯಾಂಕನವನ್ನು ನಡೆಸಲು ನಿರ್ಧರಿಸಲಾಗಿತ್ತು. ಆದರೆ ಹೈಕೋರ್ಟ್ ಆದೇಶದಂತೆ ಈ ಪರೀಕ್ಷೆ ಮುಂದೂಡಲಾಗಿತ್ತು. ಇದೀಗ ಮಾನ್ಯ ನ್ಯಾಯಾಲಯವು ಮೌಲ್ಯಾಂಕನವನ್ನು ನಡೆಸಲು ಅವಕಾಶ ನೀಡಿರುವ ಹಿನ್ನೆಲೆ ಮಾರ್ಚ್ 27ರಿಂದ 30ರವೆರೆಗ 5ನೇ ತರಗತಿ ವಿದ್ಯಾರ್ಥಿಗಳಿಗೆ ಮೌಲ್ಯಾಂಕನವನ್ನು ನಡೆಸಲು ನಿರ್ಧರಿಸಲಾಗಿದೆ. ಇನ್ನು 8ನೇ ತರಗತಿ ವಿದ್ಯಾರ್ಥಿಗಳಿಗೆ ದಿನಾಂಕ 27ರಿಂದ ಏಪ್ರಿಲ್ 01ರವರೆಗೆ ಮೌಲ್ಯಾಂಕನವನ್ನು ನಡೆಸಲಾಗುತ್ತಿದೆ.

error: Content is protected !!

Join the Group

Join WhatsApp Group