ಬಂಟ್ವಾಳ: ರೈಲು ಢಿಕ್ಕಿ ಹೊಡೆದು ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮಾ. 17. ರೈಲು ಡಿಕ್ಕಿ ಹೊಡೆದು ಯುವಕನೋರ್ವ ಮೃತಪಟ್ಟ ಘಟನೆ ಗೋಳ್ತಮಜಲು ಗ್ರಾಮದ ನೆಟ್ಲ ಸಮೀಪದ ಮಾಣಿಮಜಲು ಎಂಬಲ್ಲಿ ನಡೆದಿದೆ.

ಮೃತ ಯುವಕನನ್ನು ಅರ್ಜುನ್ (28) ಎಂದು ಗುರುತಿಸಲಾಗಿದೆ. ಯಾವ ರೀತಿಯಲ್ಲಿ ಘಟನೆ ನಡೆದಿದೆ ಎಂಬುದು ಸ್ಪಷ್ಟವಾಗಿಲ್ಲ. ಸ್ಥಳಕ್ಕೆ ರೈಲ್ವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Scroll to Top