ಕುಂದಾಪುರ: ಲಾರಿ ಢಿಕ್ಕಿಯಾಗಿ ಬಸ್ ಪಲ್ಟಿ

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.17. ಡಿಪೋದಿಂದ ಬಸ್ ನಿಲ್ದಾಣಕ್ಕೆ ಬರುತ್ತಿದ್ದ ಸರ್ಕಾರಿ ಬಸ್ಸೊಂದು ಯೂ ಟರ್ನ್ ತೆಗೆದುಕೊಳ್ಳುವ ವೇಳೆ‌ ಲಾರಿ‌ ಡಿಕ್ಕಿಯಾದ ಪರಿಣಾಮ ಪಲ್ಟಿಯಾದ ಘಟನೆ‌ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕುಂದಾಪುರದ ಸಂತೆ ಮಾರ್ಕೆಟ್ ಬಳಿ ನಡೆದಿದೆ.

ಎಂದಿನಂತೆ ಕೆಎಸ್ಆರ್ಟಿಸಿ ಬಸ್ ಸರ್ವೀಸ್ ರಸ್ತೆಯಲ್ಲಿ‌ ಬಂದು ಸಂತೆ ಮಾರ್ಕೆಟ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಯು ಟರ್ನ್ ತೆಗೆದುಕೊಂಡಿದ್ದಾರೆ. ಇದೇ ಸಂದರ್ಭ ಹಿಂದಿನಿಂದ ಬಂದ ಲಾರಿ‌ ಡಿಕ್ಕಿಹೊಡೆದಿದೆ ಎನ್ನಲಾಗಿದೆ. ಪ್ತಯಾಣಿಕರಿಲ್ಲದ ಬಸ್ ತಿರುವು ತೆಗೆದುಕೊಳ್ಳುತ್ತಿದ್ದುದರಿಂದ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಅಪಘಾತದಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ.

Also Read  ಬಂಟ್ವಾಳ : ಆಗಸ್ಟ್ 28 ರಂದು ತ್ರೈಮಾಸಿಕ ಕೆ.ಡಿ.ಪಿ ಸಮೀಕ್ಷಾ ಸಭೆ

error: Content is protected !!
Scroll to Top