(ನ್ಯೂಸ್ ಕಡಬ) newskadaba.com ಪುತ್ತೂರು, ಮಾ. 17. ಫುಲ್ವಾರಿ ಶರೀಫ್‌ನಲ್ಲಿ ನಡೆದ ಭಯೋತ್ಪಾದಕ ಚಟುವಟಿಕೆಗಳಿಗೆ ಹಣಕಾಸು ನೆರವು ಒದಗಿಸಿದ್ದಾರೆ ಎಂಬ ಆರೋಪದಡಿ ಐವರನ್ನು ಜುಲೈ ತಿಂಗಳಿನಲ್ಲಿ ಎನ್‌ಐಎ ಅಧಿಕಾರಿಗಳು ವಶಪಡಿಸಿದ್ದು, ಇದೀಗ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳಿಗೂ ಹಣ ಸಂದಾಯ ಮಾಡಿರುವ ಅಂಶ ಬೆಳಕಿಗೆ ಬಂದಿದೆ.
ಫುಲ್ವಾರಿ ಪ್ರಕರಣದಲ್ಲಿ ಬಂಧಿತರಾಗಿರುವ ಪುತ್ತೂರು ಹಾಗೂ ಬಂಟ್ವಾಳದ ಐವರು ಕಳೆದ ಜುಲೈನಲ್ಲಿ ಹತ್ಯೆಯಾಗಿದ್ದ ಪ್ರವೀಣ್ ನೆಟ್ಟಾರು ಅವರನ್ನು ಕೊಲೆ ಮಾಡಿರುವ ಹಂತಕರಿಗೂ ಹಣಕಾಸಿನ ನೆರವು ನೀಡಿದ್ದಾರೆ ಎಂದು ತನಿಖೆಯ ವೇಳೆ ಕಂಡುಬಂದಿರುವುದಾಗಿ ಮೂಲಗಳು ತಿಳಿಸಿವೆ. ಈ ನಿಟ್ಟಿನಲ್ಲಿ ಎನ್ಐಎ ತನ್ನ ವಿಚಾರಣೆಯನ್ನು ಇನ್ನಷ್ಟು ತೀವ್ರಗೊಳಿಸಿದೆ.