ಮೀನುಗಾರರ ಕಲ್ಯಾಣಕ್ಕಾಗಿ ಮಾ. 19ರಂದು ಸಾಗರ ಪರಿಕ್ರಮ-2023 ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 17. ಮೀನುಗಾರರ ಸರ್ವತೋಮುಖ ಕಲ್ಯಾಣಕ್ಕಾಗಿ ಸಾಗರ ಪರಿಕ್ರಮ-2023 (ಹಂತ-4) ಕಾರ್ಯಕ್ರಮವನ್ನು ಮಾ.19ರ ಭಾನುವಾರ ಮಧ್ಯಾಹ್ನ 3 ಗಂಟೆಗೆ ಡಾ. ಟಿ.ಎಂ.ಎ. ಪೈ ಕನ್ವೆಷನ್ ಸೆಂಟರ್‍ ನಲ್ಲಿ ಹಮ್ಮಿಕೊಳ್ಳಲಾಗಿದೆ. ಕೇಂದ್ರ ಸರ್ಕಾರದ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವರಾದ ಪರಶೋತ್ತಮ ರೂಪಾಲ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಅತಿಥಿಗಳಾಗಿ ಮೀನುಗಾರಿಕೆ, ಪಶುಸಂಗೋಪನೆ ಹಾಗೂ ಹೈನುಗಾರಿಕೆಯ ರಾಜ್ಯ ಸಚಿವರಾದ ಡಾ. ಸಂಜೀವ್ ಕುಮಾರ್ ಬಲ್ಯಾನ್, ಮೀನುಗಾರಿಕೆ ಪಶುಸಂಗೋಪನೆ, ಹೈನುಗಾರಿಕೆ, ಮಾಹಿತಿ ಮತ್ತು ಪ್ರಸಾರ ಖಾತೆಯ ರಾಜ್ಯ ಸಚಿವರಾದ ಡಾ. ಎಲ್. ಮುರುಗನ್, ಸಂಸದರಾದ ನಳಿನ್ ಕುಮಾರ್ ಕಟೀಲ್, ರಾಜ್ಯಸಭಾ ಸಂಸದರಾದ ಡಿ. ವೀರೇಂದ್ರ ಹೆಗ್ಗಡೆ, ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯದ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ, ಶಾಸಕರಾದ ಯು.ಟಿ. ಖಾದರ್, ಡಾ. ಭರತ್ ಶೆಟ್ಟಿ, ಹರೀಶ್ ಪೂಂಜ, ರಾಜೇಶ್ ನಾಯ್ಕ್ ಯು, ಸಂಜೀವ ಮಠಂದೂರು, ಉಮನಾಥ್ ಎ ಕೋಟ್ಯಾನ್, ಡಿ. ವೇದವ್ಯಾಸ ಕಾಮತ್, ವಿಧಾನ ಪರಿಷತ್ ಶಾಸಕರಾದ ಬಿ.ಎಂ. ಫಾರೂಕ್, ಪ್ರತಾಪಸಿಂಹ ನಾಯಕ್, ಹರೀಶ್ ಕುಮಾರ್, ಆಯನೂರು ಮಂಜುನಾಥ್, ಎಸ್.ಎಲ್. ಭೋಜೇಗೌಡ, ಮಂಜುನಾಥ ಭಂಡಾರಿ, ಮಂಗಳೂರು ಮೇಯರ್ ಜಯಾನಂದ ಅಂಚನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ತಿಮ್ಮಪ್ಪ ಶೆಟ್ಟಿ, ಮೀನುಗಾರಿಕಾ ಅಭಿವೃದ್ಧಿ ನಿಮಗದ ಅಧ್ಯಕ್ಷ ಎ.ವಿ. ತೀರ್ಥರಾಮ, ರಾಜ್ಯ ವಿದ್ಯನ್ಮಾನ ಅಭಿವೃದ್ಧಿ ನಿಗಮ ನಿಯಮಿತ (ಕಿಯೋನಿಕ್ಸ್) ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರವಿಶಂಕರ್ ಮಿಜಾರ್, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಮಹಾಮಂಡಳದ ಅಧ್ಯಕ್ಷ ಯಶ್‍ಪಾಲ್ ಸುವರ್ಣ ಹಾಗೂ ಕೇಂದ್ರ ಸರ್ಕಾರದ ಮೀನುಗಾರಿಕಾ ಇಲಾಖೆಯ ಕಾರ್ಯದರ್ಶಿ ಜತೀಂದ್ರನಾಥ್ ಸ್ಟೈನ್ ಭಾಗವಹಿಸುವರು.

Also Read  ಕೊಂಕಣಿ ಮಾನ್ಯತಾ ದಿನಾಚರಣೆ ➤ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನ ಮಂಗಳೂರು

error: Content is protected !!
Scroll to Top