(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 17. ಇಲ್ಲಿಗೆ ಹತ್ತಿರದಲ್ಲಿರುವ ಕಿನ್ನಿಗೋಳಿಯ ನೇಕಾರ ಸೌಧ ಸಭಾ ಭವನದಲ್ಲಿ ಮಾ.17ರ ಶುಕ್ರವಾರ ಬೆಳಿಗ್ಗೆ 11 ರಿಂದ ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಯೋಜನೆಯಡಿ ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಗ್ರಾಮೀಣ, ಅನುವಂಶಿಕ ಕಸುಬುದಾರರ ಮತ್ತು ಆರ್ಥಿಕ ಹಾಗೂ ಸಾಮಾಜಿಕ ಹಿಂದುಳಿದ ಕಡುಬಡವರ್ಗದ ಜನರಿಗೆ ಜೀವನಾಧಾರ ಕಲ್ಪಿಸಿ, ಅವರ ಜೀವನಮಟ್ಟವನ್ನು ಸುಧಾರಿಸುವ ನಿಟ್ಟಿನಲ್ಲಿ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಂದು ಅರಿವು ಕಾರ್ಯಕ್ರಮ
