ಬಿಳಿನೆಲೆ: ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನ

(ನ್ಯೂಸ್ ಕಡಬ) newskadaba.com ಕಡಬ, ಜ.05. ಕೃಷಿಗೆಂದು ತಂದಿರಿಸಲಾಗಿದ್ದ ಕೀಟನಾಶಕವನ್ನು ಸೇವಿಸಿ ವ್ಯಕ್ತಿಯೋರ್ವರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶುಕ್ರವಾರದಂದು ಠಾಣಾ ವ್ಯಾಪ್ತಿಯ ಬಿಳಿನೆಲೆ ಎಂಬಲ್ಲಿ ನಡೆದಿದೆ.

ಆತ್ಮಹತ್ಯೆಗೆ ಯತ್ನಿಸಿದವರನ್ನು ಬಿಳಿನೆಲೆ ಬೈಲು ನಿವಾಸಿ ಪುಟ್ಟಣ್ಣ ಗೌಡ (65) ಎಂದು ಗುರುತಿಸಲಾಗಿದೆ. ಇವರು ತನ್ನ ಮನೆಯಲ್ಲಿ ಕೃಷಿಗೆಂದು ತಂದಿರಿಸಲಾಗಿದ್ದ ಕೀಟನಾಶಕವನ್ನು ಸೇವಿಸಿದ್ದು, ತಕ್ಷಣವೇ ಕಡಬ ಸಮುದಾಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ,‌ 108 ಆಂಬ್ಯುಲೆನ್ಸ್ ಮೂಲಕ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Scroll to Top