ನಟಿ ಸಂಜನಾ ಗಲ್ರಾನಿಗೆ ಕೊಲೆ ಬೆದರಿಕೆ ಆರೋಪ ➤ ಎಫ್ಐಆರ್ ದಾಖಲು

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 17. ಕನ್ನಡ ಚಲನಚಿತ್ರ ನಟಿ ಸಂಜನಾ ಗಲ್ರಾನಿಗೆ ಕೊಲೆ ಬೆದರಿಕೆ ಹಾಕಿರುವ ಕುರಿತು ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಇಂದಿರಾನಗರದ ಧೂಪನಹಳ್ಳಿಯಲ್ಲಿ ವಾಸವಾಗಿರುವ ಸಂಜನಾ ಗಲ್ರಾನಿಯವರ ಪಕ್ಕದಲ್ಲಿ ಯಶೋಧಮ್ಮ ಹಾಗೂ ರಾಜಣ್ಣ ಎಂಬವರ ಮನೆಯೂ ಇದ್ದು ಅವರು, ರಸ್ತೆಗೆ ಅಡ್ಡಲಾಗಿ ಕಾರುಗಳನ್ನು ನಿಲ್ಲಿಸುತ್ತಾರೆ. ಇದನ್ನು ಪ್ರಶ್ನಿಸಿದರೆ ಕೊಲೆ ಮಾಡ್ತೀನಿ ಎಂದು ಕೊಲೆ ಬೆದರಿಕೆ ಹಾಕಿದ್ದಲ್ಲದೇ, ಅವ್ಯಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಸಂಜನಾ ಗಲ್ರಾನಿ ದೂರು ನೀಡಿದ್ದಲ್ಲದೇ, ಅವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ಈ ಕುರಿತು ಇಂದಿರಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಜನ ಸಂಚಾರದಿಂದ 50 ಮೀಟರ್ ದೂರದಲ್ಲಿ ಪಟಾಕಿ ಮಳಿಗೆ - ಕಡಬದ 5 ಕಡೆ ಪಟಾಕಿ ಸ್ಟಾಲ್ ಗೆ ಅವಕಾಶ...!

error: Content is protected !!
Scroll to Top