ಡ್ರಮ್ ನಲ್ಲಿ ಮಹಿಳೆಯ ಮೃತದೇಹ ಪತ್ತೆ ಪ್ರಕರಣ ➤ ಮೂವರ ಬಂಧನ         

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 17. ಬೆಂಗಳೂರಿನ ಬೈಯಪ್ಪನಹಳ್ಳಿ ರೈಲ್ವೇ ನಿಲ್ದಾಣದ ಬಳಿ ಡ್ರಮ್ ಒಂದರಲ್ಲಿ ಮಹಿಳೆಯೊಬ್ಬರ ಮೃತದೇಹ ಪತ್ತೆಯಾದ ಪ್ರಕರಣವನ್ನು ಭೇಧಿಸಿದ ರೈಲ್ವೇ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ.

ಕೊಲೆಯಾದ ಮಹಿಳೆಯನ್ನು ಬಿಹಾರ ಮೂಲದ ತಮನ್ನಾ ಎಂದು ಗುರುತಿಸಲಾಗಿದೆ. ಕೊಲೆ ಪ್ರಕರಣದಲ್ಲಿ ಒಟ್ಟು ಎಂಟು ಮಂದಿ ಭಾಗವಹಿಸಿದ್ದು ಸಿಟಿ ಮಾರ್ಕೆಟ್ ನಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಕಮಾಲ್(21), ತನ್ವೀರ್(24) ಶಕೀಬ್(25) ಎಂಬವರನ್ನು ಬಂಧಿಸಲಾಗಿದ್ದು, ಉಳಿದವರ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ತಿಳಿದುಬಂದಿದೆ.

Also Read  ಜಿಲ್ಲಾ ಸಂಚಾರಿ ನೇತ್ರ ಘಟಕ, ವೆನ್ ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ➤ ನೇತ್ರ ಪರೀಕ್ಷಾ ಶಿಬಿರ

error: Content is protected !!
Scroll to Top