(ನ್ಯೂಸ್ ಕಡಬ) newskadaba.com ಟರ್ಕಿ, ಮಾ. 17. ಟರ್ಕಿ ಸಿರಿಯಾ ಗಡಿಯಲ್ಲಿ ಭೂಕಂಪ ಸಂಭವಿಸಿದ್ದ ಪ್ರದೇಶದಲ್ಲಿ ದಿಢೀರ್ ಪ್ರವಾಹ ನುಗ್ಗಿದ್ದರಿಂದ ಹಲವರು ಕೊಚ್ಚಿ ಹೋಗಿದ್ದು, 14 ಮಂದಿ ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ.

ಟರ್ಕಿ ಸಿರಿಯಾ ಗಡಿಯ ಸನ್ಲಿಯುರ್ಫಾ ಒಂದರಲ್ಲಿಯೇ ಇಬ್ಬರು ಮಕ್ಕಳು ಸೇರಿ 12 ಮಂದಿ ಮೃತರಾದರು. ಪ್ರವಾಹ ಸಂತ್ರಸ್ತರ ರಕ್ಷಣೆಗೆ 10 ತಂಡಗಳನ್ನು ರಚಿಸಲಾಗಿದೆ. 5 ಮಂದಿ ಕಾಣೆಯಾಗಿದ್ದಾರೆ ಎನ್ನಲಾಗಿದೆ.















