ಕೋಲ್ಡ್ ಸ್ಟೋರೇಜ್ ಕಟ್ಟಡದ ಮೇಲ್ಛಾವಣಿ ಕುಸಿತ ➤ ಕನಿಷ್ಠ 8 ಮಂದಿ ಮೃತ್ಯು

(ನ್ಯೂಸ್ ಕಡಬ) newskadaba.com ತ್ತರಪ್ರದೇಶ, ಮಾ. 17. ಆಲೂಗಡ್ಡೆ ಕೋಲ್ಡ್ ಸ್ಟೋರೇಜ್‌ನ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ಒಟ್ಟು ಎಂಟು ಮಂದಿ ಮೃತಪಟ್ಟು, 11 ಮಂದಿಯನ್ನು ರಕ್ಷಿಸಿರುವ ಘಟನೆ ಉತ್ತರಪ್ರದೇಶದ ಸಂಭಾಲ್‌ನ ಚಂದೌಸಿ ಪ್ರದೇಶದಲ್ಲಿ ನಡೆದಿದೆ.

ಘಟನಾ ಸ್ಥಳದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ತಂಡಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ಇನ್ನೂ ಕೆಲವರು ನಾಪತ್ತೆಯಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಮಾಲೀಕನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಸಂಭಾಲ್, ಚಕ್ರೇಶ್ ಮಿಶ್ರಾ ತಿಳಿಸಿದ್ದಾರೆ.

Also Read  ವಿಶ್ವ ಹಿಂದು ಪರಿಷದ್ ಬಜರಂಗದಳ ಶ್ರೀ ವೈದ್ಯನಾಥ ಶಾಖೆ➤ ರಕ್ತದಾನ ಶಿಬಿರ

error: Content is protected !!
Scroll to Top