(ನ್ಯೂಸ್ ಕಡಬ) newskadaba.com ಬೆಳಗಾವಿ, ಮಾ. 17. ಧಾರವಾಡದಿಂದ ಬೆಳಗಾವಿಗೆ ಬಂದ ಪ್ಯಾಸೆಂಜರ್ ರೈಲಿನ ಸೀಟಿನ ಕೆಳಗಡೆ ಮೂರು ವರ್ಷದ ಬಾಲಕಿಯ ಶವ ಪತ್ತೆಯಾಗಿರುವ ಕುರಿತು ವರದಿಯಾಗಿದೆ. ಮೂಲಗಳ ಪ್ರಕಾರ, ಮೈಸೂರು-ಧಾರವಾಡ ಎಕ್ಸ್ಪ್ರೆಸ್ (ರೈಲು ಸಂಖ್ಯೆ 07357) ಮಧ್ಯಾಹ್ನ 1 ಗಂಟೆಗೆ ಬೆಳಗಾವಿ ರೈಲು ನಿಲ್ದಾಣವನ್ನು ತಲುಪಿತ್ತು. ಎಸ್ 3 ಕೋಚ್ ನ ಸೀಟ್ ನಂ. 20ರ ಕೆಳಗೆ ಸಂಜೆ 4 ಗಂಟೆ ಸುಮಾರಿಗೆ ರೈಲ್ವೇ ಸಿಬ್ಬಂದಿ ಸ್ವಚ್ಛಗೊಳಿಸುತ್ತಿದ್ದಾಗ ಗುಲಾಬಿ ಬಣ್ಣದ ಸ್ಲೀವ್ ಲೆಸ್ ಫ್ರಾಕ್ ಧರಿಸಿದ್ದ ಬಾಲಕಿಯ ಮೃತದೇಹ ಪತ್ತೆಯಾಗಿದೆ.
ಧಾರವಾಡದಿಂದ ಬಂದ ರೈಲಿನಲ್ಲಿ 3 ವರ್ಷದ ಬಾಲಕಿಯ ಶವ ಪತ್ತೆ
