ಗುತ್ತಿಗಾರು ಸರಕಾರಿ ಪ್ರೌಢ ಶಾಲೆಯಿಂದ ಕಂಪ್ಯೂಟರ್ ಬ್ಯಾಟರಿ ಕಳವು ➤ ದೂರು ದಾಖಲು

(ನ್ಯೂಸ್ ಕಡಬ) newskadaba.com ಗುತ್ತಿಗಾರು, ಮಾ. 17. ಇಲ್ಲಿನ  ಸರಕಾರಿ ಪ್ರೌಢ ಶಾಲೆಯಲ್ಲಿನ ಕೊಠಡಿಯಲ್ಲಿದ್ದ ಕಂಪ್ಯೂಟರ್ ನ ಹಳೆಯ ಬ್ಯಾಟರಿಗಳನ್ನು ಕಳವುಗೈದಿರುವ ಬಗ್ಗೆ ಶಾಲಾ ಮುಖ್ಯಸ್ಥರು ದೂರು ದಾಖಲಿಸಿದ್ದಾರೆ.

ಇಲಾಖೆಯಿಂದ ಪೂರೈಕೆಯಾಗಿದ್ದ 16 ಬ್ಯಾಟರಿಗಳು ಕಳವಾಗಿದ್ದು, ಈ ಬ್ಯಾಟರಿಗಳ ಅಂದಾಜು ಮೌಲ್ಯ 16 ಸಾವಿರ ರೂ. ಎನ್ನಲಾಗಿದೆ. ಈ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ಐಪಿಸಿ ಕಲಂ 380,454, 457ರಂತೆ ಪ್ರಕರಣ ದಾಖಲಿಸಲಾಗಿದೆ.

error: Content is protected !!
Scroll to Top