ನಾಪತ್ತೆಯಾಗಿದ್ದ ಬಾಲಕಿ ಶವವಾಗಿ ಪತ್ತೆ..!

(ನ್ಯೂಸ್ ಕಡಬ) newskadaba.com ಬಾಗಲಕೋಟೆ. ಮಾ. 17. ನಾಪತ್ತೆಯಾಗಿದ್ದ ಬಾಲಕಿಯೋರ್ವಳು ಶವವಾಗಿ ಪತ್ತೆಯಾದ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.

ಮೃತ ಬಾಲಕಿಯನ್ನು ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಗಿರಿಸಾಗರ ಗ್ರಾಮದ ರೇಖಾ ಸಂಗಪ್ಪ ಯಂಕಂಚಿ(11) ಎಂದು ಗುರುತಿಸಲಾಗಿದೆ. ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಾಲಕಿಯನ್ನು ಯಾರೋ ದುಷ್ಕರ್ಮಿಗಳು ಕೊಲೆ ಮಾಡಿ, ಮೃತದೇಹವನ್ನು ಚೀಲದಲ್ಲಿ ಹಾಕಿ ಬಾವಿಗೆ ಎಸೆದಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಬೀಳಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಕೊಲೆ ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.

Also Read  ವಿಟ್ಲ: ರಸ್ತೆಗೆ ಅಡ್ಡಲಾಗಿ ಬಂದ ದನವನ್ನು ತಪ್ಪಿಸುವ ಭರದಲ್ಲಿ ಪಲ್ಟಿಯಾದ ಆಟೋರಿಕ್ಷಾ ➤ ಚಾಲಕ ಮೃತ್ಯು

error: Content is protected !!
Scroll to Top