ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿ 10 ರೂ. ನೀಡಿದ ಅಜ್ಜ

(ನ್ಯೂಸ್ ಕಡಬ) newskadaba.com ಗೋರಖ್‌ಪುರ, ಮಾ. 17. 60 ವರ್ಷದ ವೃದ್ದನೋರ್ವ ತನ್ನ ಮೊಮ್ಮಗಳ ಮೇಲೆ ಅತ್ಯಾಚಾರ ನಡೆಸಿ ಬಳಿಕ ವಿಚಾರವನ್ನು ಯಾರೊಂದಿಗೂ ಹೇಳದಂತೆ ಬಾಯಿ ಮುಚ್ಚಿಸಲು 10 ರೂ ನೋಟನ್ನು ನೀಡಿದ ವಿಚಿತ್ರ ಘಟನೆ ವರದಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಆರೋಪಿ 60 ವರ್ಷದ ವ್ಯಕ್ತಿಯನ್ನು ಉತ್ತರ ಪ್ರದೇಶದ ಗೋರಖ್‌ಪುರ ಪೊಲೀಸರು ಬಂಧಿಸಿದ್ದಾರೆ.

 

ಸೊಸೆ ಮತ್ತು ಮೊಮ್ಮಗಳು ಕುರಿಗಳನ್ನು ಮೇಯಿಸುತ್ತಿದ್ದ ವೇಳೆ ಅಲ್ಲಿಗೆ ಬಂದ ಅಜ್ಜ, ಸೊಸೆಯನ್ನು ಮನೆಗೆ ಹೋಗುವಂತೆ ಹೇಳಿ, ಮೊಮ್ಮಗಳನ್ನು ಕೊಡಲಿ ತರಲು ಕಳುಹಿಸಿದ್ದಾನೆ. ಮನೆಗೆ ಹೋಗಿ ಕೊಡಲಿ ತಂದ ಮೊಮ್ಮಗಳನ್ನು ನಿರ್ಜನ ಸ್ಥಳಕ್ಕೆ ಕರೆದೊಯ್ದ ವೃದ್ದ ಅತ್ಯಾಚಾರ ಎಸಗಿ, ಈ ಬಗ್ಗೆ ಯಾರಿಗೂ ಹೇಳಬಾರದು ಎಂದು ಮೊಮ್ಮಗಳಿಗೆ 10 ರೂ. ನೀಡಿದ್ದಾನೆ. ಈ ವೇಳೆ ಗ್ರಾಮಸ್ಥನೊಬ್ಬ ಕಂಡು, ಜನರನ್ನು ಸೇರಿಸಿ, ವೃದ್ದನನ್ನು ಹಿಡಿದು ಥಳಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರು ಬಾಲಕಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದಾರೆ. ಈ ಕುರಿತು ಕುಟುಂಬಸ್ಥರು ನೀಡಿದ ದೂರಿನಂತೆ ಆರೋಪಿ ಅಜ್ಜನನ್ನು ಬಂಧಿಸಲಾಗಿದೆ ಎಂದು ಪೊಲೀಸ್​ ಅಧಿಕಾರಿಯೊಬ್ಬರು ಹೇಳಿದ್ದಾರೆ.

Also Read  ಕರಾವಳಿಯಲ್ಲೊಂದು ಹೃದಯವಿದ್ರಾವಕ ಘಟನೆ ➤ ಮಗನಿಗೆ ಕೊರೊನಾ ಸೊಂಕು ಮನನೊಂದು ತಂದೆ ಆತ್ಮಹತ್ಯೆ.!

error: Content is protected !!
Scroll to Top