ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ 24 ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ) newskadaba.com ಉಡುಪಿ, ಮಾ. 17. ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ಕಳೆದ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ 24ಕ್ಕೂ ಅಧಿಕ ಸಂಖ್ಯೆಯ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿರುವ ಉಡುಪಿ ಪೊಲೀಸರು ಅವರನ್ನು ನ್ಯಾಯಾಲಯಗಳಿಗೆ ಹಾಜರು ಪಡಿಸಿದ್ದಾರೆ.

ಜಿಲ್ಲೆಯಲ್ಲಿ ವಿವಿಧ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆ ಹಚ್ಚಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚ್ಚೇಂದ್ರ ಹಾಕೆ ಅವರು ವಿಶೇಷ ತಂಡಗಳನ್ನು ರಚಿಸಿದ್ದು, ಈ ತಂಡಗಳು ಸುಮಾರು 15 ದಿನಗಳಲ್ಲಿ ಹೊರ ಜಿಲ್ಲೆ ಹಾಗೂ ಹೊರರಾಜ್ಯಗಳಲ್ಲಿ ಸಂಚರಿಸಿ ಒಟ್ಟು 24ಕ್ಕೂ ಅಧಿಕ ಮಂದಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎಂದು ಎಸ್ಪಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ದಕ್ಷಿಣಕನ್ನಡ ಕಾಲೇಜು ವಿದ್ಯಾರ್ಥಿಗಳಲ್ಲಿ ಕೊರೋನಾ ಸೋಂಕು ➤ ಹೋಂ ಕ್ವಾರೆಂಟೈನಲ್ಲಿರುವಂತೆ ಸೂಚನೆ

 

error: Content is protected !!
Scroll to Top