ಮಾ. 25 ರಂದು ಮತ್ತೊಮ್ಮೆ ರಾಜ್ಯಕ್ಕೆ ಬರಲಿರುವ ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 17. ಇದೇ ಮಾ. 25ರಂದು ಮತ್ತೊಮ್ಮೆ ರಾಜ್ಯಕ್ಕೆ ಬರಲಿರುವ ಪ್ರಧಾನಿ ನರೇಂದ್ರ ಮೋದಿ, ದಾವಣಗೆರೆ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.


ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯ ಸಮಾರೋಪ ಸಮಾರಂಭವು ದಾವಣಗೆರೆಯಲ್ಲಿ ನಡೆಯಲಿದ್ದು, ಅದರಲ್ಲಿ ಭಾಗವಹಿಸಲಿರುವ ಪ್ರಧಾನಿ, ಚಿಕ್ಕಬಳ್ಳಾಪುರ ತಾಲ್ಲೂಕಿನ ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮದಲ್ಲಿ ಶ್ರೀಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯನ್ನು ಉದ್ಘಾಟಿಸಲಿದ್ದಾರೆ. ಅದೇ ದಿನ ಬೆಂಗಳೂರಿನಲ್ಲಿ ಕೆ.ಆರ್. ಪುರ- ವೈಟ್ ಫೀಲ್ಡ್ ಮೆಟ್ರೊ ಮಾರ್ಗ ಲೋಕಾರ್ಪಣೆ ಮಾಡಲಿರುವ ಅವರು ಮೆಟ್ರೊದಲ್ಲಿ ಸಂಚರಿಸಲಿದ್ದಾರೆ.

Also Read  ಸ್ವಾವಲಂಬಿ ಜೀವನಕ್ಕೆ ಧರ್ಮಸ್ಥಳ ಯೋಜನೆ ವರದಾನ

error: Content is protected !!
Scroll to Top