(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 17. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಖಾಯಂ ನೌಕರಿ ಹಾಗೂ ವೇತನ ಹೆಚ್ಚಳ ಮಾಡುವಂತೆ ಒತ್ತಾಯಿಸಿ ರಾಜ್ಯ ಆರೋಗ್ಯ ಇಲಾಖೆಯ ಎನ್ ಹೆಚ್ ಎಂ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ ನಡೆಯುತ್ತಿದ್ದು, ಇದೀಗ ಸಿಬ್ಬಂದಿಗಳಿಗೆ ಆರೋಗ್ಯ ಇಲಾಖೆಯು ಖಡಕ್ ಸೂಚನೆ ನೀಡಿದೆ.
ಈ ಬಗ್ಗೆ ಎನ್ ಹೆಚ್ ಎಮ್ ನಿರ್ದೇಶಕರು ನೋಟಿಸ್ ನೀಡಿದ್ದು, 48 ಗಂಟೆ ಒಳಗೆ ಕರ್ತವ್ಯಕ್ಕೆ ಹಾಜರಾಗಬೇಕು. ಇಲ್ಲವಾದಲ್ಲಿ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಖಡಕ್ ಸೂಚನೆ ನೀಡಿದ್ದಾರೆ.
