ಫಲಾನುಭವಿಗಳ ಸಮ್ಮೇಳನ- ಕಡಬ, ಪುತ್ತೂರು ವ್ಯಾಪ್ತಿಯ ಬಸ್ ಸಂಚಾರದಲ್ಲಿ ವ್ಯತ್ಯಯ ➤ ಸಾರ್ವಜನಿಕರು ಸಹಕರಿಸುವಂತೆ ಮನವಿ

(ನ್ಯೂಸ್ ಕಡಬ) newskadaba.com ಮಡಿಕೇರಿ, ಮಾ. 17. ಮಡಿಕೇರಿಯಲ್ಲಿ ನಡೆಯುವ ಫಲಾನುಭವಿಗಳ ಸಮ್ಮೇಳನಕ್ಕೆ ಒಪ್ಪಂದದ ಮೇರೆಗೆ ಬಸ್ಸುಗಳನ್ನು ನಿಯೋಜಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮಾ. 18 ರಂದು ಮಡಿಕೇರಿ, ಕುಶಾಲನಗರ, ವೀರಾಜಪೇಟೆ, ಸೋಮವಾರಪೇಟೆ, ಪುತ್ತೂರು, ಸುಳ್ಯ, ಕಡಬ ತಾಲೂಕುಗಳ ವ್ಯಾಪ್ತಿಯಲ್ಲಿ ಕಾರ್ಯಾಚರಿಸುತ್ತಿರುವ ಕೆಎಸ್‍ಆರ್.ಟಿಸಿ ಬಸ್ ಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಸಾರ್ವಜನಿಕರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಸಹಕರಿಸುವಂತೆ ಕೆಎಸ್‍ಆರ್.ಟಿಸಿ ಪುತ್ತೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಬಿ.ಜಯಕರ ಶೆಟ್ಟಿ ಮನವಿ ಮಾಡಿದ್ದಾರೆ.

Also Read  ಮಾಜಿ ಕೇಂದ್ರ ಸಚಿವ ಜಾರ್ಜ್ ಫರ್ನಾಂಡಿಸ್ ವಿಧಿವಶ

 

error: Content is protected !!
Scroll to Top