(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 17. ಬೆಂಗಳೂರಿನಲ್ಲಿ ಹೊಸ ಮೆಟ್ರೋ ನಿಲ್ದಾಣ ಉದ್ಘಾಟನೆಗೆ ದಿನಗಣನೆ ಶುರುವಾಗಿದೆ. ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ ಮೂಲಗಳ ಪ್ರಕಾರ ಬಹುನಿರೀಕ್ಷಿತ 12.75 ಕಿಮೀ ಉದ್ದದ ವೈಟ್ಫೀಲ್ಡ್-ಕೆಆರ್ ಪುರ ಮೆಟ್ರೋ ಮಾರ್ಗವು ಮಾರ್ಚ್ 25 ರಂದು ಉದ್ಘಾಟನೆಗೊಳ್ಳುವ ಸಾಧ್ಯತೆಯಿದೆ. ವೈಟ್ಫೀಲ್ಡ್-ಕೆಆರ್ ಪುರ ಮೆಟ್ರೋ ಮಾರ್ಗದಲ್ಲಿ 12 ನಿಮಿಷಗಳಿಗೊಮ್ಮೆ ರೈಲು ಸಂಚರಿಸುವ ಸಾಧ್ಯತೆಯಿದ್ದು, ಈ ಮೂಲಕ ಟ್ರಾಫಿಕ್ ಸಮಸ್ಯೆ ಕೊಂಚ ಕಡಿಮೆಯಾಗುವ ನಿರೀಕ್ಷೆಯಿದೆ ಎಂದು ತಿಳಿದು ಬಂದಿದೆ.
ಬೆಂಗಳೂರು ಹೊಸ ಮೆಟ್ರೋ ಮಾರ್ಗ ಉದ್ಘಾಟನೆಗೆ ದಿನಗಣನೆ
