ನಾಳೆ(ಜ.07) ಜಿಲ್ಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನ ► 200 ಕೋಟಿ ರೂ‌. ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.06. ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜನವರಿ 7ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು, ಬೆಳ್ತಂಗಡಿ, ಪುತ್ತೂರು ಹಾಗೂ ಮೂಡಬಿದ್ರೆ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಸುಮಾರು 200 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.

ಭಾನುವಾರ ಬೆಳಿಗ್ಗೆ 10.40ಕ್ಕೆ ಬೆಳ್ತಂಗಡಿಗೆ ಆಗಮಿಸುವ ಮುಖ್ಯಮಂತ್ರಿಗಳು, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ. ಮಧ್ಯಾಹ್ನ 12.45 ಕ್ಕೆ  ಬೆಳ್ತಂಗಡಿಯಿಂದ ಹೆಲಿಕಾಪ್ಟರ್ ಮೂಲಕ ಹೊರಟು 1.05 ಕ್ಕೆ ಪುತ್ತೂರು ಹೆಲಿಪ್ಯಾಡ್‍ಗೆ ಆಗಮಿಸುವರು. ಬಳಿಕ ಪುತ್ತೂರು ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ. ಮಧ್ಯಾಹ್ನ 3.45 ಕ್ಕೆ ಪುತ್ತೂರಿನಿಂದ ಹೆಲಿಕಾಪ್ಟರ್ ಮೂಲಕ ಹೊರಟು ಸಂಜೆ 4.05 ಕ್ಕೆ ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ.

Also Read  ಮಂಗಳೂರು: ಅಕ್ರಮ ಚಿನ್ನ ಸಾಗಾಟ ➤ ಆರೋಪಿ ಕಸ್ಟಮ್ಸ್ ಬಲೆಗೆ

ನಂತರ ಮಂಗಳೂರಿಗೆ ಆಗಮಿಸುವ ಮುಖ್ಯಮಂತ್ರಿಗಳು, ಸಂಜೆ 7.30 ಕ್ಕೆ ಮಂಗಳೂರು ಕದ್ರಿಪಾರ್ಕ್‍ನಲ್ಲಿ ಸಂಗೀತ ಕಾರಂಜಿ ಮತ್ತು ಹೊಸದಾಗಿ ಅಳವಡಿಸಲಾಗಿರುವ ಪುಟಾಣಿ ರೈಲು ಸೇವೆಯ ಉದ್ಘಾಟನೆ ಮಾಡಲಿದ್ದಾರೆ. ಬಳಿಕ ಮುಖ್ಯಮಂತ್ರಿಗಳು ಸಕ್ರ್ಯೂಟ್  ಹೌಸ್‍ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಡಿಸೆಂಬರ್ 8 ರಂದು ಬೆಳಿಗ್ಗೆ 10 ಗಂಟೆಗೆ ಮುಖ್ಯಮಂತ್ರಿಗಳು ಹೆಲಿಕಾಪ್ಟರ್ ಮೂಲಕ ಬೈಂದೂರಿಗೆ ತೆರಳಲಿದ್ದಾರೆ.

error: Content is protected !!
Scroll to Top