(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 18. ಬೇಸಿಗೆ ಕಾಲದಲ್ಲಿ ಬೆವರು ಮತ್ತು ಬೆವರುಗುಳ್ಳೆಯ ಸಮಸ್ಯೆಗಳು ಸಾಮಾನ್ಯ. ಆದ್ದರಿಂದ ಬೇಸಿಗೆ ಕಾಲದಲ್ಲಿ ಚರ್ಮದ ಆರೈಕೆ ಹೆಚ್ಚು ಗಮನ ನೀಡಬೇಕು. ಸರಿಯಾದ ಆರೈಕೆಯಿಂದ ಮಾತ್ರ ನಾವು ಆರೋಗ್ಯವನ್ನು ಚೆನ್ನಾಗಿ ಕಾಪಾಡಿಕೊಳ್ಳಬಹುದು.
ಬೇಸಿಗೆಯಲ್ಲಿ ಸೂರ್ಯನ ಬಿರುಬಿಸಿಲಿನ ಕಾರಣದಿಂದ ದೇಹ ಸಾಕಷ್ಟು ಬೆವರುತ್ತದೆ. ಬೆವರಿನಲ್ಲಿ ಹಲವಾರು ಸೂಕ್ಷ್ಮ ಬ್ಯಾಕ್ಟೀರಿಯಾಗಳಿರುತ್ತವೆ. ಪ್ರತಿದಿನ ದೇಹವನ್ನು ಚೆನ್ನಾಗಿ ಶುಚಿಗೊಳಿಸದಿದ್ದರೆ ಬೆವರುಗುಳ್ಳೆಗಳುಂಟಾಗಿ ಸಮಸ್ಯೆಯಾಗುತ್ತದೆ. ಬೆವರುಗುಳ್ಳೆಗಳು ತುರಿಕೆ ಮತ್ತು ಉರಿಯನ್ನು ಉಂಟುಮಾಡುತ್ತವೆ. ಕೆಲವೊಮ್ಮೆ ಕೆಂಪಗೆ ಕಾಣಿಸಿಕೊಂಡು ತೊಂದರೆ ಕೊಡುತ್ತವೆ. ಬೆವರುಗುಳ್ಳೆಗಳು ಕುತ್ತಿಗೆ, ಹೊಟ್ಟೆ, ಬೆನ್ನು, ಮುಖ ಮತ್ತು ತೊಡೆಯಲ್ಲಿ ಕಾಣಿಸಿಕೊಳ್ಳುತ್ತವೆ. ಜೊತೆಗೆ ಬೆವರಿನ ದುರ್ಗಂಧವೂ ಕಾಡುತ್ತದೆ. ಆದ್ದರಿಂದ ಬೆವರಿನ ವಾಸನೆಯಿಂದ ಪಾರಾಗಲು ಪ್ರತಿನಿತ್ಯ ತಣ್ಣೀರಿನಿಂದ ಸ್ನಾನ ಮಾಡುವುದು ಅತಿ ಮುಖ್ಯವಾದುದು.