ಪುತ್ತೂರು: ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಪುತ್ತೂರು, ಮಾ. 18. ವ್ಯಕ್ತಿಯೋರ್ವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಾಲ್ಮರದ ಮುದ್ದೋಡಿ ಎಂಬಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಕೊಂಡವರನ್ನು ಮುದ್ದೋಡಿ ನಿವಾಸಿ ವಿಜಯ ರೈ (60) ಎಂದು ಗುರುತಿಸಲಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಇವರು, ಶುಕ್ರವಾರದಂದು ಸಂಜೆ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಗಮನಕ್ಕೆ ಬಂದ ತಕ್ಷಣವೇ ಮನೆ ಮಂದಿ ವಿಜಯ ರೈ ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ದರಾದರೂ ಆ ವೇಳೆಗಾಗಲೇ ವಿಜಯ ರೈ ಮೃತಪಟ್ಟಿದ್ದರು.

Also Read  ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸುಸಜ್ಜಿತ ಆರೋಗ್ಯ ಕೇಂದ್ರ ಸ್ಥಾಪನೆಗೆ ಬೇಡಿಕೆ

error: Content is protected !!
Scroll to Top