ದೇಶದಲ್ಲಿ ಮತ್ತೆ ಕೊರೊನಾ ಅಬ್ಬರ ➤ ಒಂದೇ ದಿನ 800 ಕೇಸ್ ಪತ್ತೆ

(ನ್ಯೂಸ್ ಕಡಬ) newskadaba.com ನವದೆಹಲಿ, ಮಾ. 18. ದೇಶದಲ್ಲಿ ಮತ್ತೆ ಕೊರೊನಾ ವೈರಸ್ ಅಬ್ಬರ ಶುರುವಾಗಿದ್ದು, ಒಂದೇ ದಿನ 796 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದಾಖಲಾಗಿವೆ. ಈ ಮೂಲಕ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 5 ಸಾವಿರದ ಗಡಿ ದಾಟಿದೆ. ದೇಶದಲ್ಲಿ ಒಂದೇ ದಿನ 796 ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಕರ್ನಾಟಕದಲ್ಲಿ ಒಬ್ಬರು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 5,000 ಗಡಿ ದಾಟಿದ್ದು, ಇದು 109 ದಿನದ ಗರಿಷ್ಠ ಪ್ರಕರಣಗಳಾಗಿವೆ. ದೇಶದಲ್ಲಿ ಈವರೆಗೂ 4.46 ಕೋಟಿ ಮಂದಿ ಕೊರೊನಾ ಸೋಂಕು ಗುರಿಯಾಗಿದ್ದು, ಅದರಲ್ಲಿ 4.41 ಕೋಟಿ ಮಂದಿ ಗುಣಮುಖರಾಗಿದ್ದು, ಹಾಗೂ 5.30 ಲಕ್ಷ ಜನರು ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ.

Also Read  ಕುಂದಾಪುರ: ವ್ಯಕ್ತಿಯೋರ್ವನ ಬರ್ಬರ ಹತ್ಯೆ

 

error: Content is protected !!
Scroll to Top