ನಾಲ್ಕೂರು ಗ್ರಾಮದಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ

(ನ್ಯೂಸ್ ಕಡಬ) newskadaba.com.ಸುಳ್ಯ, ಮಾ 18.ಮಾ. 18ರಿಂದ ಸುಳ್ಯ ತಾಲೂಕಿನ ನಾಲ್ಕೂರು ಗ್ರಾಮದ ಹಾಲೆ ಮಜಲು ಶ್ರೀ ವೆಂಕಟೇಶ್ವರ ಸಭಾ ಭವನದಲ್ಲಿ ಜಿಲ್ಲಾಧಿಕಾರಿಯವರು ಗ್ರಾಮ ವಾಸ್ತವ್ಯ ನಡೆಸಲಿದ್ದಾರೆ.

ಈ ಸಂದರ್ಭದಲ್ಲಿ ಅವರು ಸ್ಥಳೀಯ ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಿ, ಕೆಲವು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆಹರಿಸಲಿದ್ದಾರೆ. ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗುವಂತೆ ಅಪರ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!

Join the Group

Join WhatsApp Group