(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 18. ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ದಳದವರು ಜಿಲ್ಲೆಯಲ್ಲಿ ಕಾಡ್ಗಿಚ್ಚು ಹಾಗೂ ಇತರೆ ಬೆಂಕಿ ಅವಘಡಗಳನ್ನು ನಂದಿಸುವ ಕಾರ್ಯವನ್ನು ಉತ್ತಮವಾಗಿ ಮಾಡುತ್ತಿದ್ದು, ಈ ಕಾರ್ಯಕ್ಕೆ ಮತ್ತಷ್ಟು ಅನುಕೂಲವಾಗುವಂತೆ ಜಿಲ್ಲೆಯಲ್ಲಿರುವ ಬೃಹತ್ ಕೈಗಾರಿಕೆಗಳು, ಉದ್ದಿಮೆಗಳು ಬೆಂಕಿ ನಂದಿಸುವ ನೀರಿನ ಟ್ಯಾಂಕರ್’ಗಳನ್ನು ಒದಗಿಸಿಕೊಡಲು ಕೈಜೋಡಿಸುವಂತೆ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಕರೆ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮಂಗಳೂರು: ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಅಗತ್ಯ ಕ್ರಮ ಕೈಗೊಳ್ಳಿ ➤ ಡಿ.ಸಿ. ರವಿಕುಮಾರ್ ಸೂಚನೆ
