ಸಿಗ್ನಲ್ ನಲ್ಲಿ ನಿಂತಿದ್ದ ಸ್ಕೂಟರ್ ಗೆ ಲಾರಿ ಢಿಕ್ಕಿ ➤ ತಂದೆ – ಮಗಳು ದುರ್ಮರಣ

(ನ್ಯೂಸ್ ಕಡಬ) newskadaba.com ಮಂಗಳೂರು,ಮಾ. 18. ನಿಂತಿದ್ದ ಸ್ಕೂಟರ್ ಗೆ ಹಿಂದಿನಿಂದ ಬಂದ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ತಂದೆ ಮಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ನಂತೂರ್ ಸರ್ಕಲ್ ನಲ್ಲಿ ಇಂದು ಮಧ್ಯಾಹ್ನ ನಡೆದಿದೆ.

ತಂದೆ ಮಗಳಿಬ್ಬರು ದ್ವಿಚಕ್ರ ವಾಹನದಲ್ಲಿ ಕುಳಿತು ಸಿಗ್ನಲ್ ಕಾಯುತ್ತಿದ್ದ ವೇಳೆ ಏಕಾಏಕಿ ಬಂದ ಲಾರಿಯು ದ್ವಿಚಕ್ರ ವಾಹನದ ಮೇಲೆ ಹರಿದಿದ್ದು, ಪರಿಣಾಮ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ತಂದೆ – ಮಗಳು ಎನ್ನಲಾಗಿದ್ದು ಮೃತರ ವಾಹನದಲ್ಲಿ ದೊರಕಿದ ಮಾಹಿತಿಯಂತೆ ಬಲ್ಮಠದ ಸ್ಯಾಮುವೆಲ್ ಜೇಸುದಾಸ್ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಲಾರಿ ಚಾಲಕನಿಗೆ ಸ್ಥಳೀಯರು ಧರ್ಮದೇಟು ನೀಡಿದ್ದು ನಂತೂರಿನಲ್ಲಿ ಕರ್ತವ್ಯದಲ್ಲಿದ್ದ ಸಂಚಾರಿ ಪೊಲೀಸರು ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Also Read  ಪರಿಶಿಷ್ಟ ಜಾತಿಯ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

error: Content is protected !!
Scroll to Top