ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ➤ 3 ಪ್ರತ್ಯೇಕ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 18. ಇಲ್ಲಿನ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಸಂಬಂಧಿಸಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಗೋವಿಂದರಾಜನಗರ ಪೊಲೀಸ್ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣ ದಾಖಲಾಗಿದೆ.

ಬ್ಯಾನರ್ ಕಟ್ಟುವ ವಿಚಾರವಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆಯಾಗಿತ್ತು. ಘಟನೆಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದರು. ಗಾಯಗೊಂಡ ಹೆಡ್ ಕಾನ್ಸ್ಟೇಬಲ್ ಹೆಚ್ ಸಿ ವರದರಾಜು ನೀಡಿದ ದೂರಿನಂತೆ 36 ಮಂದಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ವಿರುದ್ದ ಎಫ್ಐಆರ್ ದಾಖಲಾಗಿದೆ. ಹಾಗೆ ಕಾಂಗ್ರೆಸ್ ಕಾರ್ಯಕರ್ತೆ ಪ್ರೇಮಲತಾ ಹಾಗೂ ಬಿಜೆಪಿಯ ರಮ್ಯ ಎಂಬವವರು ಕೂಡ ದೂರು ನೀಡಿದ್ದರು.

Also Read  ಬೆಳ್ತಂಗಡಿ :ನಾಪತ್ತೆಯಾಗಿದ್ದ ಯುವಕ ಕೆರೆಯಲ್ಲಿ ಶವವಾಗಿ ಪತ್ತೆ

 

error: Content is protected !!
Scroll to Top