ಸುಳ್ಯ: ಮಾದಕ ವಸ್ತು ಮಾರಾಟ ➤ ಓರ್ವ ಅರೆಸ್ಟ್

crime, arrest, suspected

(ನ್ಯೂಸ್ ಕಡಬ) newskadaba.com ಸುಳ್ಯ, ಮಾ. 18. ಮಾದಕ ವಸ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಸುಳ್ಯ ಪೊಲೀಸರು ಬಂಧಿಸಿದ ಘಟನೆ ಇಂದು ಬೆಳ್ಳಂಬೆಳಗ್ಗೆ ನಡೆದಿದೆ.


ಸುಳ್ಯದ ಕುರುಂಜಿಗುಡ್ಡೆ ಪರಿಸರದಲ್ಲಿ ಮಾದಕ ವಸ್ತು ಮಾರಾಟವಾಗುತ್ತಿರುವ ಖಚಿತ ಮಾಹಿತಿಯ ಮೇರೆಗೆ ಪೊಲೀಸ್ ಠಾಣಾ ಉಪನಿರೀಕ್ಷಕ ದಿಲೀಪ್ ರವರ ನೇತೃತ್ವದ ಪೊಲೀಸರ ತಂಡವು ದಿಢೀರ್ ದಾಳಿ ನಡೆಸಿ ಆರೋಪಿಯನ್ನು ಮಾಲು ಸಮೇತ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಳಿಕ ಆತನನ್ನು ಸುಳ್ಯ ಠಾಣೆಗೆ ಕರೆತಂದು ತನಿಖೆ ಮುಂದುವರಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Also Read  ಮಂಗಳೂರು: ಖಾಸಗಿ ಬಸ್ ಢಿಕ್ಕಿ ► ಪಾದಚಾರಿ ಸ್ಥಳದಲ್ಲೇ ಮೃತ್ಯು

error: Content is protected !!
Scroll to Top