ಪುಲ್ವಾಮ ಗುಂಡಿನ ಚಕಮಕಿ ➤ ಉಗ್ರರು ಪರಾರಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 18. ಶ್ರೀನಗರದ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ಭದ್ರತಾಪಡೆಗಳೊಂದಿಗೆ ಗುಂಡಿನ ಚಕಮಕಿಯ ಬಳಿಕ ಉಗ್ರರು ಪರಾರಿಯಾದ ಘಟನೆ ನಡೆದಿದೆ.

ಪುಲ್ವಾಮಾದ ಮಿಟ್ರಿಗಾಮ್ ಗ್ರಾಮದಲ್ಲಿ ಉಗ್ರರ ಉಪಸ್ಥಿಯ ಬಗ್ಗೆ ನಿರ್ದಿಷ್ಟವಾದ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಹುಡುಕಾಟ ತೀವ್ರಗೊಂಡಂತೆ ಅಡಗಿಕೊಂಡಿದ್ದ ಭಯೋತ್ಪಾದಕರು ಶೋಧನಾ ತಂಡದ ಮೇಲೆ ಗುಂಡು ಹಾರಿಸಿದ್ದರು. ಈ ವೇಳೆ   ಭಯೋತ್ಪಾದಕರು ಕತ್ತಲೆಯ ಲಾಭವನ್ನು ಪಡೆದುಕೊಂಡು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದರು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

Also Read  ಆಟೋ ಮತ್ತು ಕಾರಿನ ನಡುವೆ ಸರಣಿ ಅಪಘಾತ..! ➤ ಕಾರು ಸಂಪೂರ್ಣ ನಜ್ಜುಗುಜ್ಜು

error: Content is protected !!
Scroll to Top