(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.18. ಗಾರ್ಡನ್ ಸಿಟಿ ಎಂದೇ ಖ್ಯಾತಿ ಪಡೆದಿರುವ ಬೆಂಗಳೂರು ಜಾಗತಿಕ ಮಟ್ಟದಲ್ಲಿ ನೀಡುವ ಆರೋಗ್ಯಕರ ನಗರಗಳ ಪಾಲುದಾರಿಕೆ ಪ್ರಶಸ್ತಿ 2023 ಕ್ಕೆ ಭಾಜನವಾಗಿದೆ.
ಧೂಮಪಾನ-ಮುಕ್ತ ಕಾನೂನುಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿದ ಉದ್ದೇಶದಿಂದ ಈ ಪ್ರಶಸ್ತಿ ನೀಡಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.
